ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಪ್ರಧಾನಿ ನರೇಂದ್ರ ಮೋದಿ ಕೀಳುಮಟ್ಟದ ಹೇಳಿಕೆಗಳಿಂದ ರಾಜ್ಯದ ಸಮ್ಮಿಶ್ರ ಸರ್ಕಾರದ ಅಭಿವೃದ್ಧಿಯ ಅಜೆಂಡಾ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ತಮ್ಮನ್ನು ಕ್ಲರ್ಕ್ ರೀತಿ ಮಾಡಿದೆ ಎನ್ನುವ ನರೇಂದ್ರ ಮೋದಿ ಹೇಳಿಕೆಗೆ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಪ್ರಧಾನಿ ಈಚೆಗಷ್ಟೆ ಸಾಲಮನ್ನಾ ವಿಷಯದಲ್ಲೂ ಲಘುವಾಗಿ ಮಾತನಾಡಿದ್ದಾರೆ. ಪದೇ ಪದೆ ಈ ರೀತಿ ಹೇಳುವುದರಿಂದ ನಮ್ಮ ಅಭಿವೃದ್ಧಿಯ ದಾರಿಗೆ ಅಡ್ಡಿ ಉಂಟು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಮುಖ್ಯಮಂತ್ರಿಗಳ ಈ ಟ್ವೀಟ್ ಗೆ ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಆರೋಪ ಪ್ರತ್ಯಾರೋಪ ನಡೆಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ