ಪ್ರಗತಿವಾಹಿನಿ ಸುದ್ದಿ, ಯಕ್ಸಂಬಾ
ಯಕ್ಸಂಬಾದ ದಿ ಜನತಾ ಶಿಕ್ಷಣ ಸಂಸ್ಥೆಯ ಚನ್ನಬಸಪ್ಪ ಕರಾಳೆ ಪ್ರಾಥಮಿಕ, ಮಾಧ್ಯಮಿಕ, ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯದ ನೂತನ ಕಟ್ಟಡ ಶಂಕುಸ್ಥಾಪನೆ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭ ಶನಿವಾರ ನಡೆಯಲಿದೆ.
ಸಂಸ್ಥೆಯ ಚೇರ್ಮನ್ ರಾಜೇಂದ್ರ ಕರಾಳೆ ಸಂಸ್ಥೆಯ ಮುಖ್ಯ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಸಂಸದ ಪ್ರಕಾಶ ಹುಕ್ಕೇರಿ ಮತ್ತು ಗಣೇಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ ಬಿಡುಗಡೆಯಾದ ಅನುದಾನದಲ್ಲಿ 5 ಶಾಲಾ ಕೊಠಡಿಗಳ ಶಂಕುಸ್ಥಾಪನೆ ಮತ್ತು ಸಂಸ್ಥೆಯ ಶಿಲ್ಪಕಾರ್, ಲಿಂಗಾಯತ್ ರೆಜಿಮೆಂಟ್ ಸ್ಥಾಪಕ ಚನ್ನಬಸಪ್ಪ ಕರಾಳೆ ಇವರ ಜೀವನದ ಮೇಲೆ ಎಂ.ಬಿ ಹೂಗಾರ್ ಇವರು ಬರೆದಿರುವ ಚನ್ನಬಸಪ್ಪ ಕರಾಳೆ ಪುಸ್ತಕದ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.
ಅದೇ ದಿನ ಸಾಯಂಕಾಲ 5 ಗಂಟೆಗೆ ಚನ್ನಬಸಪ್ಪ ಕರಾಳೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗುವುದು.
ಈ ಕಾರ್ಯಕ್ರಮಕ್ಕೆ ನಿಡಸೋಸಿ ಸಿದ್ದ ಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿ, ಚಿಂಚಣಿಯ ಸಿದ್ದಸಂಸ್ಥಾನಮಠದ ಅಲ್ಲಮಪ್ರಭು ಮಹಾಸ್ವಾಮಿ, ಸಂಸದ ಪ್ರಕಾಶ್ ಹುಕ್ಕೇರಿ, ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾದ ಗಣೇಶ್ ಹುಕ್ಕೇರಿ, ಹಿರಿಯ ಸಾಹಿತಿ ಡಾ.ಎಂ.ಬಿ ಹೂಗಾರ ಸೇರಿದಂತೆ ಗಣ್ಯರು ಉಪಸ್ಥಿತರಿರುತ್ತಾರೆ.
ಪತ್ರಿಕಾಗೋಷ್ಠಿಯಲ್ಲಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎ. ಚೌಗುಲೆ, ಪಟ್ಟಣ ಪಂಚಾಯಿತಿ ಸದಸ್ಯರಾದ ಸುನಿಲ ಸಪ್ತಸಾಗರೆ, ಸೇರಿದಂತೆ ಶಾಲೆಯ ಎಲ್ಲ ಶಿಕ್ಷಕರು ಮತ್ತು ಗಣ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ