ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ
ಯರಗಟ್ಟಿಯಲ್ಲಿ ಶುಕ್ರವಾರ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಉದ್ಯಮಿ ಪಿ.ಆರ್.ರಡ್ಡಿಯವರ ಜನ್ಮ ದಿನದ ನಿಮಿತ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯರಗಟ್ಟಿಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ಡಾಲ್ಫಿನ್ ಸ್ಟೋನ್ ಕ್ರಷರ್ ಮತ್ತು ಎಂ ಸ್ಯಾಂಡ್ ಯರಗಣವಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ನೂರೈವತ್ತಕ್ಕಿಂತ ಹೆಚ್ಚು ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ 60 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.
ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಎಸ್.ಬಳ್ಳೂರ್, ತಾಲೂಕು ಆರೋಗ್ಯಧಿಕಾರಿ ಡಾ. ಮಹೇಶ ಚಿತ್ತರಗಿ, ಉದ್ಯಮಿ ಪಿ.ಆರ್.ರಡ್ಡಿ, ಡಾ.ಮಹಾಂತೇಶ ಅರಬೆಂಚಿ, ರೈತ ಸಂಘದ ಮುಖಂಡ ಸೋಮು ರೈನಾಪುರ ಮೊದಲಾದವರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ