ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನಗರದ ಯಳ್ಳೂರು ರಸ್ತೆಯ ಕೆಎಲ್‌ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಗೆ ರಾಜ್ಯದ ಆರೋಗ್ಯ ಸಚಿವ ಶಿವಾನಂದ ಪಾಟೀಲ ಭೇಟಿ ನೀಡಿದರು.
ವಿಪ ಸದಸ್ಯ ಮಹಾಂತೇಶ ಕವಟಗಿಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಪ್ಪಾಸಾಬ ನರಟ್ಟಿ, ಆಸ್ಪತ್ರೆಯ ನಿರ್ದೇಶಕ ಡಾ.ಎಸ್.ಸಿ. ಧಾರವಾಡ, ಹಿರಿಯ ವೈದ್ಯ ಡಾ. ಬಿ.ಎಸ್. ಮಹಾಂತಶೆಟ್ಟಿ ಇದ್ದರು.