ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಕರ್ನಾಟಕದಲ್ಲಿ ಭಾರತೀಯ ಜನತಾಪಾರ್ಟಿ ತಾನೇ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಬಿಜೆಪಿ 22 ಸ್ಥಾನಗಳ ಗುರಿ ಹೊಂದಿತ್ತು. ಆದರೆ ಸಧ್ಯದ ಪರಿಸ್ಥಿತಿಯಲ್ಲಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಹಾಸನ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಮಾತ್ರ ಮೈತ್ರಿ ಪಕ್ಷ ಸ್ಪಷ್ಟ ಮುನ್ನಡೆಯಲ್ಲಿದೆ.
ಮಂಡ್ಯದಲ್ಲಿ ಸುಮಲತಾ ಮತ್ತು ನಿಖಿಲ್ ಮಧ್ಯ ತೀವ್ರ ಪೈಪೋಟಿ ನಡೆಯುತ್ತಿದೆ. ಬಳ್ಳಾರಿಯಲ್ಲೂ ತೀವ್ರ ಪೈಪೋಟಿ ನಡೆದಿದೆ.
ತುಮಕೂರಲ್ಲಿ ಎಚ್.ಡಿ.ದೇವೇಗೌಡ ಹಿನ್ನಡೆಯಲ್ಲಿದ್ದಾರೆ. ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಿನ್ನಡೆ ಅನುಭವಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ವೀರಪ್ಪ ಮೊಯ್ಲಿ ಹಿಂದೆ ಬಿದ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ