Belagavi NewsBelgaum NewsKarnataka News

*ಮುಂದಿನ ಮೂರ್ನಾಲ್ಕು ದಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ಮುಂದಿನ ಮೂರ್ನಾಲ್ಕು ದಿನದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕೊಡಗು, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ.

Home add -Advt

ಇನ್ನು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ, ದಾವಣಗೆರೆ, ಬಳ್ಳಾರಿ, ವಿಜಯನಗರ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಚಿತ್ರದುರ್ಗ,ದಕ್ಷಿಣ ಕನ್ನಡ, ವಿಜಯಪುರ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಹಾಸನ, ಮೈಸೂರು, ಕೊಡಗು, ತುಮಕೂರು, ಮಂಡ್ಯ ಚಿಕ್ಕಮಂಗಳೂರು, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ ಚಿಕ್ಕಬಳ್ಳಾಪುರದಲ್ಲಿ ಏ.30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗ್ತಿದೆ ಎಂದು ಹವಾನಾನ ಇಲಾಖೆ ತಿಳಿಸಿದೆ.

Related Articles

Back to top button