Latest

ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ಶಾಸಕರ ಮೇಲಿನ ವಿಶ್ವಾಸ ಕಳೆದುಕೊಂಡಿವೆ -ಕವಟಗಿಮಠ

  ಪ್ರಗತಿವಾಹಿನಿ ಸುದ್ದಿ, ಮಾಂಜರಿ
ರಾಜ್ಯದ ಸಮ್ಮಿಶ್ರ ಸರಕಾರದ ನೀತಿಗೆ ಬೇಸತ್ತು ಮತ್ತು ಅವರಲ್ಲಿಯ ಆಂತರಿಕ ಕಚ್ಚಾಟದಿಂದ ಭಿನ್ನಮತಿಯ ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆಯೆ ಹೊರತು ಬಿಜೆಪಿ ಅಪರೇಶನ್ ಕಮಲ ಮಾಡುತ್ತಿಲ್ಲ. ಬಿಜೆಪಿಯ ಯಾವುದೇ ನಾಯಕರು ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಕಾಂಗ್ರೆಸ್ ಶಾಸಕರ ಮೇಲಿನ ವಿಶ್ವಾಸ ಕಳೆದುಕೊಂಡಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕಾಮಗಾರಿಗಳು ನಡೆಯದಿರುವುದಕ್ಕೆ ಬೇಸತ್ತು ರಾಜ್ಯದಲ್ಲಿರುವ ಹಲವಾರು ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಪಕ್ಷದಿಂದ ಹೊರೆಗೆ ಬರುವ ನಿರ್ಧಾರ ತೆಗೆದುಕೊಂಡಿರಬಹುದು ಎಂದರು.
ಅಥಣಿ ಶಾಸಕ ಮಹೇಶ ಕುಮಟೊಳ್ಳಿ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆನ್ನುವುದು ಸುಳ್ಳು.
ಶಾಸಕ ಗಣೇಶ ಹುಕ್ಕೇರಿ ಅವರು ಹೇಳಿದಂತೆ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ. ಆದರೆ ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಮಾಧ್ಯಮದೆದುರು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಕವಟಗಿಮಠ ಕಿವಿಮಾತು ಹೇಳಿದರು.

Related Articles

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button