ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಪ್ರೋತ್ಸಾಹ ಮತ್ತು ನೆರವು ನೀಡುವ ಉದ್ದೇಶದಿಂದ ಆರಂಭಿಸಲಾಗುತ್ತಿರುವ ಸ್ವಾಧ್ಯಾಯ ಅಧ್ಯಯನ ಮತ್ತು ಮಾರ್ಗದರ್ಶನ ಕೇಂದ್ರದ ಆರಂಭೋತ್ಸವ ಇದೇ 29ರಂದು ಬೆಳಗಾವಿಯ ಗುರುದೇವ ರಾನಡೆ ಮಂದಿರದಲ್ಲಿ ನಡೆಯಲಿದೆ.
ಅಕಾಡೆಮಿ ಆಫ್ ಕಂಪ್ಯಾರೇಟಿವ್ ಫಿಲಾಸಫಿ ಆ್ಯಾಂಡ್ ರಿಲಿಜಿಯನ್ (ಎಸಿಪಿಆರ್) ಈ ಕಾರ್ಯಕ್ರಮ ಆಯೋಜಿಸಿದೆ. ಅಂದು ಮುಂಚಾನೆ 10 ಗಂಟೆಗೆ ಪ್ರಾದೇಶಿಕ ಆಯುಕ್ತ ಪಿ.ಎ.ಮೇಘಣ್ಣವರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ರೋಟರಿ ಕ್ಲಬ್ ಆಫ್ ಬೆಳಗಾಂ ಅಧ್ಯಕ್ಷ ಮುಕುಂದ ಉಡಚಣಕರ್ ಅಧ್ಯಕ್ಷತೆ ವಹಿಸುವರು. ಡಿಸಿಪಿ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಜಿಲ್ಲಾ ಪಂಚಾಯತಿ ಅಕೌಂಟ್ ಆಫೀಸರ್ ಶಂಕರಾನಂದ ಬನಶಂಕರಿ, ಕ್ಯಾಂಟೋನ್ಮೆಂಟ್ ಸಿಇಒ ದಿವ್ಯಾ ಶಿವರಾಮ, ಐಇಎಸ್ ಮನು ಭಟ್ ಪಾಲ್ಗೊಂಡು ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕುರಿತು ಮಾರ್ಗದರ್ಶನ ಮಾಡುವರು. ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಸಮಾರೋಪ ಭಾಷಣ ಮಾಡುವರು.
ರಾನಡೆ ಮಂದಿರದಲ್ಲಿ ಈಗಾಗಲೆ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಲೈಬ್ರರಿ ಆರಂಭಿಸಲಾಗಿದೆ. ಇನ್ನು ಮುಂದೆ ವಾರಕ್ಕೊಂದು ದಿನ ತಜ್ಞರಿಂದ ಮಾರ್ಗದರ್ಶನ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಯೋಜನ ಪಡೆಯಬೇಕು ಎಂದು ಎಸಿಪಿಆರ್ ಗೌರವ ಕಾರ್ಯದರ್ಶಿ ಎಂ.ಬಿ.ಜಿರಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ