ಮುಂಬೈ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಕಳುಹಿಸಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವೆ ಪಂಕಜಾ ಮುಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸರ್ಜಿಕಲ್ ದಾಳಿಯ ಬಗ್ಗೆ ಸಾಕ್ಷ್ಯ ಕೇಳುವ ಕುರಿತು ವಾಗ್ದಾಳಿ ನಡೆಸಿದ ಅವರು, ‘ ಸರ್ಜಿಕಲ್ ಸ್ಟ್ರೈಕ್ಸ್ ಬಗ್ಗೆ ಸಾಕ್ಷ್ಯವನ್ನು ಕೇಳುತ್ತಲೇ ಇದ್ದಾರೆ. ರಾಹುಲ್ ಗಾಂಧಿ ಅವರ ದೇಹಕ್ಕೆ ಬಾಂಬ್ ಕಟ್ಟಿ ಅವರನ್ನು ಬೇರೆ ದೇಶಕ್ಕೆ ಕಳುಹಿಸಬೇಕು. ಬಳಿಕ ಅವರಿಗೆ ಸತ್ಯದ ಅರಿವಾಗಬಹುದು’ ಎಂದು ಹೇಳಿದ್ದಾರೆ.
ಈ ದೇಶವನ್ನು ಭಯೋತ್ಪಾದನೆ ಮುಕ್ತಗೊಳಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ ಅದನ್ನು ಪ್ರಶ್ನಿಸುತ್ತಾರೆ. ನಮ್ಮ ಸೈನಿಕರ ಮೇಲೆ ದಾಳಿ ಮಾಡಿದಾಗ ಸರ್ಜಿಕಲ್ ದಾಳಿ ಮಾಡಿದರೆ ರಾಹುಲ್ ಗಾಂಧಿ ಅವರು ನಮಗೆ ಸಾಕ್ಷ್ಯ ಒದಗಿಸುವಂತೆ ಹೇಳುತ್ತಾರೆ. ಅವರ ಕುತ್ತಿಗೆ ಸುತ್ತ ಬಾಂಬ್ ಕಟ್ಟಿ ಬೇರೊಂದು ದೇಶಕ್ಕೆ ಎಸೆಯಬೇಕು. ಇಂದಿನ ದಿನಗಳಲ್ಲಿ ಹೆಡ್‌ಲೈನ್‌ನಲ್ಲಿ ಕಾಣಿಸಿಕೊಳ್ಳುವ ಸಲುವಾಗಿ ಸರ್ಜಿಕಲ್ ಸ್ಟ್ರೈಕ್‌ನಲ್ಲಿ ನಮ್ಮನ್ನು ಪ್ರಶ್ನಿಸುವಂತಾಗಿದೆ’ ಎಂದು ಪಂಕಜಾ ತಿಳಿಸಿದ್ದಾರೆ.
ಪಂಕಜಾ ಮುಂಡೆ ಅವರ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ. ಮುಂಡೆ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ’ ಎಂದು ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ