ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇಲ್ಲಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಡೈರಿ ವಿಷಯವಾಗಿ ತಮ್ಮ ವಿರುದ್ಧ ಮಾತನಾಡಿರುವ ಹಿನ್ನೆಲೆಯಲ್ಲಿ ರಾಹುಲ್ ವಿರುದ್ಧ ಹರಿಹಾಯ್ದ ಯಡಿಯೂರಪ್ಪ, ಅವರೊಬ್ಬ ಬಚ್ಚಾ ಎಂದರು. ಈ ಬಗ್ಗೆ ಕಾನೂನು ಕ್ರಮಕ್ಕ ಯೋಚಿಸುತ್ತಿರುವುದಾಗಿಯೂ ಹೇಳಿದರು.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ತಿರಸ್ಕಾರವಾಗಲಿದೆ ಎಂದ ಅವರು ಮಂಡ್ಯ ಜಿಲ್ಲಾಧಿಕಾರಿ ವಿರುದ್ಧವೂ ಕಿಡಿಕಾರಿದರು.
ವಿಮಾನ ನಿಲ್ದಾಣದಿಂದ ಅವರು ಯುಕೆ 27 ಹೊಟೆಲ್ ಗೆ ಆಗಮಿಸಿದ ಯಡಿಯೂರಪ್ಪ ಬಿಜೆಪಿಯ ಸ್ಥಳೀಯ ಮುಖಂಡರೊಂದಿಗೆ ಉಪಹಾರ ಸೇವಿಸಿದರು. ನಂತರ ಕತ್ತಿ ಸಹೋದರರೊಂದಿಗೆ ಚರ್ಚೆ ಆರಭಿಸಿದ್ದಾರೆ.
ಸಂಸದ ಸುರೇಶ ಅಂಗಡಿ, ಶಾಸಕರಾದ ಉಮೇಶ ಕತ್ತಿ, ಮಹಾಂತೇಶ ಕವಟಗಿಮಠ, ಅಭಯ ಪಾಟೀಲ, ಅನಿಲ ಬೆನಕೆ, ಶಶಿಕಲಾ ಜೊಲ್ಲೆ, ಆನಂದ ಮಾಮನಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಪ್ರಮುಖರಾದ ರಮೇಶ ಕತ್ತಿ, ವಿಶ್ವನಾಥ ಪಾಟೀಲ, ಅಣ್ಣಾಸಾಹೇಬ ಜೊಲ್ಲೆ, ಅಮರಸಿಂಹ ಪಾಟೀಲ, ಎಂ.ಬಿ.ಜಿರಲಿ, ರಾಜೇಂದ್ರ ಹರಕುಣಿ, ರಮೇಶ ಕತ್ತಿ ಮೊದಲಾದವರಿದ್ದಾರೆ.
ನಾಳೆ ಬೆಳಗ್ಗೆ 9 ಗಂಟೆಗೆ ಕತ್ತಿ ಸಹೋದರರ ಜೊತೆ ಯಡಿಯೂರಪ್ಪ ಚರ್ಚೆ
ಕತ್ತಿ ಮುನಿಸು: ನಾಳೆ ಬೆಳಗಾವಿಗೆ ಧಾವಿಸುತ್ತಿರುವ ಯಡಿಯೂರಪ್ಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ