ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸುಮಾರು 12 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವ ಬೆಳಗಾವಿ ರೈಲ್ವೆ ನಿಲ್ದಣ ಕಟ್ಟಡ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.
ಲೋಕಸಭಾ ಸದಸ್ಯ ಸುರೇಶ ಅಂಗಡಿ ಪೂಜೆ ನೆರವೇರಿಸಿದರು. ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ, ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಮಹೇಶ ಬಾಗಿ, ರೈಲ್ವೆ ಅಧಿಕಾರಿಗಳು ಈ ವೇಳೆ ಇದ್ದರು.
1987ರಲ್ಲಿ ನಿರ್ಮಾಣವಾಗಿದ್ದ ಕಟ್ಟಡಕ್ಕೆ ಮುಕ್ತಿ ನೀಡಿ ಹೊಸ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.