Latest

ರೋಹಿಣಿ ಸಿಂಧೂರಿ ಸೇರಿ ಕೆಲವು ಅಧಿಕಾರಿಗಳ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಶುಕ್ರವಾರ ಪುನಃ ಕೆಲವು ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗುತ್ತಿದ್ದು, ರೋಹಿಣಿ ಅವರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅಕ್ರಮ ಪಾಶಾ ಅವರನ್ನು ಹಾಸನ ಜಿ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದ್ದು, ಅವರು ಶುಕ್ರವಾರವೇ ಅಧಿಕಾರ ಸ್ವೀಕರಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಸಹ ರೋಹಿಣಿ ಅವರನ್ನು ವರ್ಗಾಯಿಸಲಾಗಿತ್ತು. ಆದರೆ ಅವಧಿ ಪೂರ್ವ ವರ್ಗಾವಣೆ ಮಾಡಲಾಗಿದೆ ಎಂದು ಅವರು ಚುನಾವಣೆ ಆಯೋಗದಿಂದ ತಡೆಯಾಜ್ಞೆ ತಂದಿದ್ದರು.

ಹಾವೇರಿ ಜಿಲ್ಲಾಧಿಕಾರಿ ಎಂ.ವಿ ವೆಂಕಟೇಶ್ ಅವರನ್ನು ರಾಷ್ಟ್ರೀಯ ತೋಟಗಾರಿಕಾ ಮಿಷನ್ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿಯಾಗಿ ಕೆಪಿಎಸ್ಸಿ ಪರೀಕ್ಷಾಧಿಕಾರಿ ಕೃಷ್ಣಾ ಬಾಜಪೇಯಿ ಅವರನ್ನು ನೇಮಿಸಲಾಗಿದೆ.

Related Articles

Back to top button