ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪಕ್ಷಭೇದ ಮರೆದು ಜಿಲ್ಲೆಯ ಬಿಜೆಪಿ ನಾಯಕರು ಸಚಿವೆ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಲು ದೌಡಾಯಿಸಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬೆಳಗಾವಿಯ ಬಿಜೆಪಿ ನಾಯಕರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಅವರು ಆರೋಗ್ಯ ವಿಚಾರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ