ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ : ಬುಧವಾರ ಬೆಳಗಿನ ಜಾವ ಬೆಳಗಾವಿಯ ಗೋಗಟೆ ವೃತ್ತದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ ಹತ್ತಿ ಚಾಲಕ ಸಜೀವ ದಹನವಾಗಿದ್ದಾನೆ.
ನಾಗಾಲ್ಯಾಂಡ್ ಮೂಲದ ಲಾರಿ ಮುಂದೆ ಹೊರಟಿದ್ದ ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಕ್ಯಾಬಿನ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಎಸಿ ಅಳವಡಿಕೆಯಿಂದ ಬೇಗ ಬೆಂಕಿ ಆವರಿಸಿದೆ. ಲಾರಿ ಡಿಕ್ಕಿ ಹೊಡೆದ ಕಾರಣ ಸ್ಟೇರಿಂಗ್ ನಲ್ಲಿ ಚಾಲಕ ಸಿಲುಕಿ ಹಾಕಿಕೊಂಡಿದ್ದರಿಂದ ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ ದೇಹ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿ ವಿ.ಎಸ್.ಠಕ್ಕೇಕರ ತಿಳಿಸಿದ್ದಾರೆ.
ಈ ಕುರಿತು ಸಂಚಾರ ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೃತ ಚಾಲಕನ ಗುರುತು ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ