Kannada NewsLatestNationalPolitics

*ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 206 ಕ್ಷೇತ್ರಗಳಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್.ರವಿ ಪ್ರತಿಜ್ಞಾವಿಧಿ ಬೋಧಿಸಿದರು. ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇದೇ ವೇಳೆ ಸಚಿವರಾಗಿ ದಿಲೀಪ್ ಘೋಷ್, ಅಗ್ನಿ ಮಿತ್ರ ಪಾಲ್, ಅಶೋಕ್ ಕೀರ್ತನಿಯಾ , ಕ್ಷುದಿರಾಮ್ ಟುಡು, ನಿಶಿತ್ ಪ್ರಾಮಾಣಿಕ್ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ ನಬಿನ್, ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಂಧ್ರ ಸಿಎಂ ಚಂದ್ರಬಾಬು ನಾಯ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

Related Articles

Back to top button