ಪ್ರಗತಿವಾಹಿನಿ ಸುದ್ದಿ, ನವದೆಹಲಿ
ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ 15 ಅಭ್ಯರ್ಥಿಗಳನ್ನು ಈ ಪಟ್ಟಿ ಒಳಗೊಂಡಿದ್ದು, ಗುಜರಾತ್ ಮತ್ತು ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರಗಳನ್ನು ಮಾತ್ರ ಹೊಂದಿದೆ.
ಸೋನಿಯಾ ಗಾಂಧಿ ರಾಯ್ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವುದನ್ನು ಖಚಿತಪಡಿಸಲಾಗಿದೆ. ರಾಹುಲ್ ಗಾಂಧಿ ಅಮೇಠಿಯಿಂದಲೇ ಕಣಕ್ಕಿಳಿಯಲಿದ್ದಾರೆ.
ಸಲ್ಮಾನ್ ಖುರ್ಷಿದ್ ಉತ್ತರ ಪ್ರದೇಶದ ಫರೂಖಾಬಾದ್ ನಿಂದ, ಸಲೀಮ್ ಇಕ್ಬಾಲ್ ಶೇರವಾನಿ ಉತ್ತರ ಪ್ರದೇಶದ ಬಡೌನ್ ದಿಂದ, ಇಮ್ರಾನ್ ಮಸೂದ್ ಸಹರಾನ್ಪುರದಿಂದ ಕಣಕ್ಕಿಳಿಯಲಿದ್ದಾರೆ.
(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೆ ಶೇರ್ ಮಾಡಿ)