ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
‘ಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28ರಲ್ಲಿ 12 ಸ್ಥಾನಗಳನ್ನು ಜೆಡಿಎಸ್ ಪಡೆಯಲಿದೆ’ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಸೀಟು ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಲೋಕಸಭೆ ಅಧಿವೇಶನ ಮುಗಿದ ನಂತರ ರಾಹುಲ್ ಗಾಂಧಿ ಜೊತೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಲಾಗುತ್ತದೆ’ ಎಂದರು.
‘ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ. ಕಾಂಗ್ರೆಸ್ ಜೊತೆ ಮೈತ್ರಿ ಇದ್ದರೂ ಜೆಡಿಎಸ್ ಉಳಿಸಿಕೊಳ್ಳಲು ಎಲ್ಲ ಮುಂಜಾಗ್ರತೆ ವಹಿಸಲಾಗುವುದು’ ಎಂದು ಅವರು ತಿಳಿಸಿದರು.
ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಅಂತಿಮ ಕ್ಷಣದವರೆಗೂ ಪ್ರಯತ್ನ ಮಾಡಿದರೂ ಆಗಲಿಲ್ಲ. ಸರಕಾರಕ್ಕೆ ಯಾವುದೇ ಸಮಸ್ಯಯಾಗಬಾರದೊಂದು ಸುಮ್ಮಿನಿದ್ದೇವೆ. ಉಪ ಸಭಾಪತಿ, ಸಚೇತಕ ಸ್ಥಾನ ನಮಗೆ ಸಿಕ್ಕಿದೆ’ ಎಂದು ಗೌಡ ಹೇಳಿದರು. ಲೋಕಸಭೆ ಚುನಾವಣೆಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಉಳಿದುಕೊಂಡಿರುವ ನಮ್ಮ ಎರಡು ಖಾತೆಗಳನ್ನು ತುಂಬಲಾಗುವುದು ಎಂದು ಅವರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ