Latest

ಚಿಕ್ಕೋಡಿಯಲ್ಲಿ ಪ್ರಕಾಶ ಹುಕ್ಕೇರಿ ಸೋತಿದ್ದೇಕೆ?

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಇಲ್ಲಿ ಮಾಜಿ ಸಚಿವ ಪ್ರಕಾಶ ಹುಕ್ಕೇರಿಯನ್ನು ಸೋಲಿಸಿರುವ ಅವರು ಸಂಸತ್ ಗೆ ಪ್ರವೇಶಿಸಿದ್ದಾರೆ.

Home add -Advt

ಪ್ರಕಾಶ ಹುಕ್ಕೇರಿ ಚಿಕ್ಕೋಡಿಯಲ್ಲಿ ಸ್ವಯಂಕೃತ ಅಪರಾಧ ಮಾಡಿಕೊಂಡಿದ್ದಾರೆ ಎಂದು ಪ್ರಗತಿವಾಹಿನಿ ಚುನಾವಣೆಗೆ ಮುನ್ನವೇ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. 

ಚಿಕ್ಕೋಡಿ ಪ್ರಕಾಶ ಹುಕ್ಕೇರಿಗೆ ಕಬ್ಬಿಣದ ಕಡಲೆಯಾಗಿದ್ದು ಹೇಗೆ?

ತಾವೇ ಮಾಡಿಕೊಂಡಿರುವ ತಪ್ಪಿನಿಂದ ಅವರು ಸೋಲನುಭವಿಸಿದ್ದಾರೆ. ಹಿಂದಿನ ಅವಧಿಯಲ್ಲಿ ಕ್ಷೇತ್ರದ ಬಹುಪಾಲು ಪ್ರದೇಶವನ್ನು ನಿರ್ಲಕ್ಷಿಸಿದ್ದು, ಕಾರ್ಯಕರ್ತರನ್ನು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಅವರ ಸೋಲಿಗೆ ಕಾರಣ. 

ಬಿಜೆಪಿಯಲ್ಲಿ ಆರಂಭದಲ್ಲಿ ಅಭ್ಯರ್ಥಿ ವಿಷಯದಲ್ಲಿ ಗೊಂದಲ ಉಂಟಾಗಿದ್ದರೂ, ಸಂಘಪರಿವಾರ ಇಲ್ಲಿ ಉತ್ತಮ ಕೆಲಸ ಮಾಡುವ ಮೂಲಕ ಬಿಜೆಪಿಗೆ ಗೆಲುವು ತಂದುಕೊಟ್ಟಿದೆ. 

ಜೊತೆಗೆ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮತ್ತು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸಂಘಟಿತ ಪ್ರಯತ್ನ ಮಾಡಿದ್ದೂ ಗೆಲುವಿಗೆ ಕಾರಣವಾಗಿದೆ.

 

Related Articles

Back to top button