Latest

ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ
ಕೆ.ಎಲ್.ಇ ಸಂಸ್ಥೆಯ ಸ್ಥಳೀಯ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ೨೦೧೮-೧೯ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಅಂಕುರಮ್ ಕಾರ್ಯಕ್ರಮದ ನಿಮಿತ್ತವಾಗಿ ಗುರುವಾರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮಕ್ಕೆ ತಾಲೂಕಾ ವೈದ್ಯಾಧಿಕಾರಿ ಡಾ. ಸೀಮಾ ಗುಂಜಾಳ ಹಾಗೂ ಜಿ.ಆಯ್.ಬಾಗೇವಾಡಿ ಮಹಾವಿದ್ಯಾಲಯದ ಉಪಪ್ರಾಚಾರ್ಯ ಡಾ.ಸಿ.ವಿ.ಕೊಪ್ಪದ ಮುಖ್ಯಅತಿಥಿಗಳಾಗಿ ಆಗಮಿಸಿದ್ದರು. ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ರಾಮನಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯ ಬಿ.ಎಚ್. ಪರಮಾನಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಬಾಹುಬಲಿ ಲಕ್ಕನ್ನವರ ಸೇರಿದಂತೆ ಪಾಲಕರು, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಪಿ.ಎ.ಜನವಾಡೆ ಸ್ವಾಗತಿಸಿದರು. ಪ್ರಿಯಂಕಾ ಸ್ವಾಮಿ ಮತ್ತು ಪ್ರತಿಭಾ ಸುಳಕುಡೆ ಪರಿಚಯಿಸಿದರು. ಎಮ್.ಕೆ.ಖೋತ ನಿರೂಪಿಸಿದರು. ಎಸ್.ಆರ್.ಮಲ್ಲಾಡೆ ವಂದಿಸಿದರು,

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button