Latest

*ವಿಎಒ ಪರೀಕ್ಷೆ ಅಕ್ರಮ*: *ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳು ಸಸ್ಪೆಂಡ್*

ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ನಾಲ್ವರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಮೊಬೈಲ್ ಬಳಸಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ನಾಲ್ವರು ಹೆಡ್‌ಕಾನ್ಸ್‌ಟೆಬಲ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಓರ್ವ ಸಿಪಿಐ ಹಾಗೂ ಇಬ್ಬರು ಪಿಎಸ್‌ಐಗಳ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಹಾವೇರಿ ಎಸ್‌ಪಿ ಯಶೋಧಾ ವಂಟಗೋಡಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ನಡೆದ VAO ಪರೀಕ್ಷೆಯಲ್ಲಿ ಹಾನಗಲ್ ಮೂಲದ ಶಂಕರ್ ಬನ್ನೂರು ಎಂಬಾತ ಮೊಬೈಲ್ ಬಳಸಿ ಪರೀಕ್ಷೆ ಬರೆದು 151 ಅಂಕ ಗಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಈಗಾಗಲೇ ಶಂಕರ್ ಬನ್ನೂರು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೊಬೈಲ್ ಕರೆಗಳ ವಿವರ (CDR) ಪರಿಶೀಲಿಸಿ, ಪರೀಕ್ಷೆ ವೇಳೆ ಆತ ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

Related Articles

Back to top button