ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಲೋಕಸಭಾ ಚುನಾವಣೆ-2019 ರ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರಿಗೆ ಅದರಲ್ಲೂ ವಿಶೇಷವಾಗಿ ವಿಕಲಚೇತನ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗವು ಚುನಾವಣಾ ಆಪ್ Chunavana App ಬಿಡುಗಡೆ ಮಾಡಿದೆ.
ಮತದಾರರು ತಮ್ಮ ಮೊಬೈಲಿನಲ್ಲಿ ಚುನಾವಣಾ ಆಪ್ (Chunavana App)ನ್ನು ಡೌನ್ಲೋಡ್ ಮಾಡಿಕೊಂಡು ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಹೆಸರು, ಮತದಾರರ ಗುರುತಿನ ಚೀಟಿ (ಎಪಿಕ್ ಕಾರ್ಡ ಸಂಖ್ಯೆ), ಮತಗಟ್ಟೆಗಳ ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ. ವಿಶೇಷವಾಗಿ ವಿಕಲಚೇತನ ಮತದಾರರು ಗಾಲಿ ಕುರ್ಚಿ, ಭೂತಕನ್ನಡಿ ಸೌಲಭ್ಯಕ್ಕಾಗಿ ಬುಕ್ಕಿಂಗ್ ಮಾಡಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ