Kannada NewsKarnataka NewsLatest

*ಉಡುಪಿ ಹತ್ಯೆ ಕೇಸ್; ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಹಫೀಜ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕಿದ್ದ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿದೆ.

Home add -Advt

ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 155, 505(2) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


Related Articles

Back to top button