ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ವಿಮಾನ ನಿಲ್ದಾಣ ಅಧಿಕಾರಿಗಳು ಹಾಗು ವೈಮಾನಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಲೋಕಸಭಾ ಸದಸ್ಯ ಸುರೇಶ ಅಂಗಡಿ ಸೋಮವಾರ ಸಭೆ ನಡೆಸಿ ಹಲವಾರು ವಿಷಯಗಳ ಕುರಿತು ಚರ್ಚಿಸಿದ್ದಾರೆ.
* ಬೆಳಗಾವಿಯಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಸಾರಿಗೆ ವ್ಯವಸ್ಥೆ
* ಬೆಳಗಾವಿ ನಗರದಿಂದ ವಿಮಾನ ನಿಲ್ದಾಣಕ್ಕೆ ಚತುಷ್ಪಥ ಮಾರ್ಗ ನಿರ್ಮಾಣ
* ಭವಿಷ್ಯತ್ತಿನ ಬೇಡಿಕೆಯ ಆಧಾರವನ್ನಾಗಿಟ್ಟುಕೊಂಡು ಪ್ರತ್ಯೇಕವಾದ ಸರಕು ಸಾಗಾಣಿಕಾ ಕೇಂದ್ರ ನಿರ್ಮಾಣ
* ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ” ಎಂದು ಮರುನಾಮಕರಣ ಮಾಡುವುದರ ಕುರಿತು
* ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯದಲ್ಲಿ ಹೆಚ್ಚುವರಿ ಕ್ರಮಗಳು
* ಕೆಳಮಟ್ಟದ ಸಿಬ್ಬಂದಿ ವರ್ಗದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ
* ಸ್ಥಳೀಯ ಆರ್ಕಿಟೆಕ್ಚರ್ ವಿದ್ಯಾರ್ಥಿಗಳಿಂದ ವಿಮಾನ ನಿಲ್ದಾಣವನ್ನು ಇನ್ನಷ್ಟು ಸೌಂದರ್ಯೀಕರಣಗೊಳಿಸುವುದು ಸಂಸದರ ಚರ್ಚೆಯ ಪ್ರಮುಖ ಅಂಶಗಳಾಗಿವೆ.
ಇದೇ ವೇಳೆ, ಉಡಾನ್ 3 ಯೋಜನೆಯಲ್ಲಿ ಬೆಳಗಾವಿ ಸೇರ್ಪಡೆ ಕುರಿತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ