ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಮತ್ತು ದಂಡು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಮತ್ತು ವೈದ್ಯಾಧಿಕಾರಿಗಳಿಂದ ಗುರುವಾರ ಸಾಯಂಕಾಲ ೭ ಗಂಟೆಗೆ ಕ್ಯಾಂಡಲ್ ಮಾರ್ಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಬಿಮ್ಸ್ ನಿರ್ದೇಶಕ ಡಾ. ಎಸ್.ಟಿ ಕಳಸದ, ಪರಶುರಾಮ ದುಡಗುಂಟಿ, ಮುಖ್ಯ ಲೆಕ್ಕಾಧಿಕಾರಿಗಳು ಜಿಲ್ಲಾ ಪಂಚಾಯತ ಬೆಳಗಾವಿ, ಜಿಲ್ಲಾ ಸ್ವೀಪ್ ಐಕಾನ್ ರಾಘವೇಂದ್ರ ಅನ್ವೇಕರ ಮತ್ತು ರವಿ ಭಜಂತ್ರಿ, ಸ್ವೀಪ್ ಸಹಾಯಕ ಅಧಿಕಾರಿ ಅವರು ಚಾಲನೆ ನೀಡಿದರು.
ಕ್ಯಾಂಡಲ್ ಮಾರ್ಚ್ ಬಿಮ್ಸ್ ಕಾಲೇಜಿನಿಂದ ಪ್ರಾರಂಭವಾಗಿ ಚನ್ನಮ್ಮ ವೃತ್ತದಲ್ಲಿ ಮುಕ್ತಾಯಗೊಂಡಿತು. ಕ್ಯಾಂಡಲ್ ಮಾರ್ಚ್‌ನಲ್ಲಿ ಗಣಾಚಾರಿ, ಲೆಕ್ಕ ಅಧೀಕ್ಷಕರು, ಹಾಲಪ್ಪಗೋಳ, ಲೆಕ್ಕ ಸಹಾಯಕ ಮತ್ತು ಸ್ವೀಪ್ ತಂಡದ ಸದಸ್ಯರು ಉಪಸ್ಥಿತರಿದ್ದರು. ಸದರಿ ಕ್ಯಾಂಡಲ್ ಮಾರ್ಚ್‌ನಲ್ಲಿ ಸುಮಾರು ೫೦೦ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ