Latest

ಗುಜರಾತ್ 17ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಗುಜರಾತ್ ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಗುಜರಾತ್ ಗೆ 17ನೇ ಮುಖ್ಯಮಂತ್ರಿ ಪದಗ್ರಹಣವಾದಂತಾಗಿದೆ.

ಅಹಮದಾಬಾದ್ ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವೃತ ನೂತನ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಭೂಪೇಂದ್ರ ಪಟೇಲ್ ಒಬ್ಬರೇ ಪ್ರಮಾಣವಚನ ಸ್ವೀಕರಿಸಿದ್ದು, ನೂತನ ಸಚಿವರ ಪಟ್ಟಿ ಇನ್ನೂ ಸಿದ್ಧಗೊಂಡಿಲ್ಲ ಎಂದು ತಿಳಿದುಬಂದಿದೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಉಪಸ್ಥಿತರಿದ್ದರು.

Home add -Advt

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ

Related Articles

Back to top button