ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಹೊರಟ್ಟಿ ಆಗ್ರಹ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ

ನನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಕಳೆದ 3 ವರ್ಷದಿಂದ ವರ್ಗಾವಣೆ ಪ್ರಕ್ರಿಯೆ ವಿವಿಧ ಕಾರಣಗಳಿಂದ ನನೆಗುದಿಗೆ ಬಿದ್ದಿದೆ. ಈಗ ಚುನಾವಣೆ ಆಯೋಗ ವರ್ಗಾವಣೆಗೆ ಕ್ಲಿಯರನ್ಸ್ ಕೊಟ್ಟಿದೆ. ಹಾಗಾಗಿ ಯಾವುದೇ ಅಡ್ಡಿಯಿಲ್ಲ ಎಂದು ಹೊರಟ್ಟಿ ಹೇಳಿದ್ದಾರೆ.

ಕಳೆದ 3 ವರ್ಷದಿಂದ ಗ್ರಾಮೀಣ ಶಿಕ್ಷಕರು ವರ್ಗಾವಣೆಗೆ ಕಾಯುತ್ತಿದ್ದಾರೆ. ಈಗ ಅಲ್ಲಲ್ಲಿ ಪ್ರತಿಭಟನೆಗಳೂ ನಡೆಯುತ್ತಿವೆ. ಹಾಗಾಗಿ ಇನ್ನೂ ವಿಳಂಬ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

Home add -Advt

Related Articles

Back to top button