ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಇಲ್ಲಿಯ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಚೇರಮನ್, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಮತ್ತು ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಬುಧವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ತೆರಳಿ ಶಿವಕುಮಾರ ಸ್ವಾಮಿಗಳ ಆರೋಗ್ಯ ವಿಚಾರಿಸಿದರು.
ಮಾಜಿ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಜಿ.ಎಸ್.ಬಸವರಾಜು ಜೊತೆ ಮಠಕ್ಕೆ ತೆರಳಿದ ಅವರು, ಶ್ರೀಗಳ ದರ್ಶನ ಪಡೆದು ಅಲ್ಲಿಯ ಕಿರಿಯ ಸ್ವಾಮಿಗಳೊಂದಿಗೆ ಚರ್ಚಿಸಿದರು.
ಶಿವಕುಮಾರ ಸ್ವಾಮಿಗಳು ತುಬಾ ಲವಲವಿಕೆಯಿಂದ ಇದ್ದರು. ಮಾತನಾಡಲು ಪ್ರಯತ್ನಿಸಿದರಾದರೂ ಮುಖಕ್ಕೆ ಮಾಸ್ಕ್ ಹಾಕಿದ್ದರಿಂದ ಸಾಧ್ಯವಾಗಲಿಲ್ಲ. ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡು ಬಂದಿರುವುದಾಗಿ ಕಿರಿಯ ಶ್ರೀಗಳು ತಿಳಿಸಿದರು ಎಂದು ಕವಟಗಿಮಠ ಪ್ರಗತಿವಾಹಿನಿಗೆ ತಿಳಿಸಿದರು.
ಸ್ವಾಮಿಗಳ ಆರೋಗ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಡಾ.ಪರಮೇಶ್ವರ ಕೆಎಲ್ಇ ಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಅವರು ಕೂಡ ಸ್ವಾಮಿಗಳ ಆರೋಗ್ಯದ ಕುರಿತು ಸಂಪೂರ್ಣ ಮಾಹಿತಿ ನೀಡಿದರು ಎಂದು ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ