Latest
ಶುಕ್ರವಾರ ಬೆಳಗಾವಿಗೆ ಡಿಸಿಎಂ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಖಾಸಗಿ ಕಾರ್ಯಕ್ರಮದ ನಿಮಿತ್ತ ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ವಿಶೇಷ ವಿಮಾನದಲ್ಲಿ ಬೆಳಗ್ಗೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಇಲ್ಲಿಂದ ರಸ್ತೆ ಮಾರ್ಗದಲ್ಲಿ ಖಾನಾಪುರಕ್ಕೆ ತೆರಳುವರು.
ಖಾನಾಪುರದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ 2 ಗಂಟೆಗೆ ಪುನಃ ಬೆಳಗಾವಿಗೆ ಆಗಮಿಸಿ ಬೆಂಗಳೂರಿಗೆ ತೆರಳುವರು.



