Latest

ಶಿವಮೊಗ್ಗ ಸ್ಫೋಟ ಪ್ರಕರಣ; ಮತ್ತೆ ನಾಲ್ವರ ಬಂಧನ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡಿನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಜಮೀನಿನ ಮಾಲೀಕರಾದ ಶಂಕರಗೌಡ ಕುಲಕರ್ಣಿ, ಅವಿನಾಶ್ ಕುಲ್ಕರ್ಣಿ, ಸ್ಫೋಟಕ ಮಾರಾಟ ಮಾಡುತ್ತಿದ್ದ ಆಂಧ್ರ ಮೂಲದ ಶ್ರೀರಾಮುಲು ಹಾಗೂ ಆತನ ಪುತ್ರ ಮಂಜುನಾಥ್ ಎಂದು ಗುರುತಿಸಲಾಗಿದೆ.

Home add -Advt

ಶಿವಮೊಗ್ಗ ಸ್ಫೋಟ ಪ್ರಕರಣದ ಬಳಿಕ ಆರೋಪಿಗಳ ಪತ್ತೆಗಾಗಿ 6 ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಹೊರ ರಾಜ್ಯಗಳಲ್ಲೂ ಆರೋಪಿಗಳಿಗಾಗಿ ಶೋಧ ನಡೆದಿತ್ತು. ಪ್ರಕರಣ ಸಂಬಂಧ ಈ ಹಿಂದೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಇದೀಗ ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ.

Related Articles

Back to top button