೧ ರಿಂದ ೧೯ ವರ್ಷದ ಎಲ್ಲಾ ಮಕ್ಕಳಿಗೆ ಫೆ. ೮ ರಂದು ಮಾತ್ರೆ ನೀಡಲು ಸಿದ್ಧತೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಸದೃಢ ಸಮಾಜ ನಿರ್ಮಾಣಕ್ಕಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಲು ಮಕ್ಕಳಿಗೆ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ೧ ರಿಂದ ೧೯ ವರ್ಷದ ಎಲ್ಲಾ ಮಕ್ಕಳಿಗೆ ಫೆ. ೮ ರಂದು ಕಡ್ಡಾಯವಾಗಿ ಮಾತ್ರೆ ನೀಡಲು ಜಿಲ್ಲೆಯಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಷ್ಷೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲೆಯಲ್ಲಿ ಒಟ್ಟು ೧೫,೦೫೮೦೭ (೧ ವರ್ಷದಿಂದ ೧೯ ವರ್ಷದ) ಮಕ್ಕಳನ್ನು ಗುರುತಿಸಲಾಗಿದೆ. ೧-೫ ವರ್ಷದೊಳಗಿನ ಮಕ್ಕಳಿಗೆ ಈ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. ೬-೧೯ ವರ್ಷದ ವಯಸ್ಸಿನ ಮಕ್ಕಳಿಗೆ ಶಾಲೆಗಳಲ್ಲಿ ನೀಡಲಾಗುತ್ತದೆ. ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು. ಈ ಮಾತ್ರೆಯು ಮಕ್ಕಳಿಗೆ ಸುರಕ್ಷಿತವಾಗಿರುತ್ತದೆ. ರಾಷ್ರೀಯ ಜಂತುಹುಳು ನಿವಾರಣಾ ದಿನದಂದು ಅನಿವಾರ್ಯ ಕಾರಣಗಳಿಂದ ಮಾತ್ರೆಗಳನ್ನು ಸೇವಿಸದೇ ಇರುವ ಮಕ್ಕಳಿಗೆ ಮಾಪ್-ಆಪ್ ದಿನವಾಗಿ ಫೆ.೧೪ ರಂದು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಶಾಲಾ ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ನೀಡಲಾಗಿದೆ. ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ೧೦೪ ಸಹಾಯವಾಣಿ ಮೂಲಕ ಸಾರ್ವಜನಿಕರು ಪಡೆದುಕೊಳ್ಳಬಹುದು ಅಥವಾ ಸಮೀಪದ ಸರ್ಕಾರಿ ಆಸ್ಪತ್ರೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ