Latest

ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳ ಸಭೆ

  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಕಬ್ಬು ಬೆಳೆಗಾರರಿಗೆ ಒಪ್ಪಂದದಂತೆ ನೀಡಬೇಕಾಗಿದ್ದ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿ, ಬಾಕಿ ಪಾವತಿಗೆ ಸೂಚನೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ತಮ್ಮ ಕಛೇರಿಯಲ್ಲಿ ಭೇಟಿಯಾದ ಮುಖ್ಯಮಂತ್ರಿಗಳು ಸಕ್ಕರೆ ಇಲಾಖೆ ಕಾರ್ಯದರ್ಶಿ, ಆಯುಕ್ತರು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು, ಕಬ್ಬು ಬೆಳೆಗಾರರ ಹಿತ ರಕ್ಷಿಸುವಂತೆ ನಿರ್ದೇಶನ ನೀಡಿದರು.
ಅದರಂತೆ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.
ಸಕ್ಕರೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಸಕ್ಕರೆ ಆಯುಕ್ತ ಅಜಯ್ ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button