ಏಪ್ರೀಲ್ ೨೭ ರಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಲೋಕಾಯುಕ್ತ ಪೊಲೀಸರಿಂದ ಬೆಳಗಾವಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ದೂರು, ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಆರ್.ಕೆ.ಪಾಟೀಲ್ ರವರು ತಿಳಿಸಿದ್ದಾರೆ.
ಈ ನಿಮಿತ್ಯವಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಏಪ್ರೀಲ್ ೨೭ ರಿಂದ ೩೦ ರ ವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಏಪ್ರಿಲ್ ೨೭ ರಂದು ಆರ್.ಆರ್.ಅಂಬಡಗಟ್ಟಿ, ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಖಾನಾಪೂರ ಲೊಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ, ಪಿ.ಆರ್.ದಭಾಲಿ ಪೋಲಿಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ರಾಮದುರ್ಗ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ, ಗೋಪಾಲ ಡಿ.ಜೋಗಿನ, ಪೋಲಿಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಬೈಲಹೊಂಗಲ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಏಪ್ರಿಲ್ ೨೯ ರಂದು ಆರ್.ಕೆ.ಪಾಟೀಲ್, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ, ಗೋಪಾಲ ಡಿ ಜೋಗಿನ, ಪೋಲಿಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಸವದತ್ತಿ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲಿ, ಮತ್ತು ಪಿ.ಆರ್.ಧಬಾಲಿ, ಪೋಲಿಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ರಾಯಬಾಗ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಏಪ್ರಿಲ್ ೩೦ ರಂದು ಆರ್.ಕೆ.ಪಾಟೀಲ್, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಕಿತ್ತೂರು ತಾಲೂಕಿನ ಡೊಂಬರಕೊಪ್ಪ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ, ಆರ್.ಆರ್.ಅಂಬಡಗಟ್ಟಿ, ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಬೆಳಗಾವಿ ಲೋಕಾಯುಕ್ತ ಕಛೇರಿಯಲ್ಲಿ, ಪಿ.ಆರ್.ಧಬಾಲಿ, ಪೋಲಿಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಚಿಕ್ಕೋಡಿ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಮತ್ತು ಗೋಪಾಲ ಡಿ ಜೋಗಿನ, ಪೋಲಿಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಇವರು ಗೋಕಾಕ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೪ ಗಂಟೆವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಳಿಗಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬೆಳಗಾವಿ ಕಛೇರಿ ದೂರವಾಣಿ ಸಂಖ್ಯೆ:೦೮೩೧-೨೪೨೧೫೫೦ ಮತ್ತು ೦೮೩೧-೨೪೨೧೯೨೨ ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ