Kannada NewsKarnataka NewsPolitics

*ಮಾಜಿ ಶಾಸಕ ನಿಧನ: ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಜಾಫರ್ ಶರೀಫ್ ಅವರ ಅಳಿಯ ಸೈಯದ್ ಯಾಸಿನ್ ಅವರು ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾಗಿದ್ದು, ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಪುಲಕೇಶಿನಗರದ ಕೋಲ್ಸ್ ಪಾರ್ಕ್‌ ನಿವಾಸಕ್ಕೆ ತೆರಳಿ ಯಾಸಿನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.

ಸೈಯದ್ ಯಾಸಿನ್ ಅವರಿಗೆ 70 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಸೈಯದ್ ಯಾಸಿನ್ ಅವರು ಮಾಜಿ ಕೇಂದ್ರ ಸಚಿವ ಜಾಫರ್ ಶರೀಫ್ ಅವರ ಅಳಿಯರಾಗಿದ್ದರು. 

Home add -Advt

ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಸ್ಪರ್ಧಿಸಿ, 1999 ಮತ್ತು 2008ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ರಾಯಚೂರು ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ ಏಕೈಕ ಮುಸ್ಲಿಂ ಅಭ್ಯರ್ಥಿಯಾಗಿದ್ದರು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿಯೂ ಪಕ್ಷ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಸೈಯದ್ ಯಾಸಿನ್ ಅವರು ಪತ್ನಿ, ನಾಲ್ವರು ಪುತ್ರರು, ಕುಟುಂಬಸ್ಥರು, ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

Related Articles

Back to top button