ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬೆಳಗಾವಿ ಜಿಲ್ಲಾಡಳಿತದಿಂದ ಈ ವರ್ಷದ ಸರ್ವೋತ್ತಮ ಪ್ರಶಸ್ತಿ ಪಡೆದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಶನಿವಾರ ಜಿಲ್ಲಾಡಳಿತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪ್ರೀತಮ್ ನಸ್ಲಾಪುರೆ, ಚಿಕ್ಕೋಡಿಯ ಕೃಷಿ ಅಧಿಕಾರಿ ಶೈಲಜಾ ಬೆಳ್ಳಂಕಿಮಠ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಬಿ.ಕುಲಕರ್ಣಿ, ಕೃಷಿ ಮಾರುಕಟ್ಟೆ ಇಲಾಖೆ ಉಪನಿರ್ದೇಶಕರ ಕಚೇರಿ ಮೇಲ್ವಿಚಾರಕ ನವೀನ್ ಪಾಟೀಲ ಹಾಗೂ ಜಿಲ್ಲಾಧಿಕಾರಿ ಕಾರ್ಯಾಲಯದ ಪ್ರಥಮ ದರ್ಜೆ ಸಹಾಯಕ ಬಿ.ಆರ್.ಹೊಂಗಲ್ ಅವರನ್ನು ಸನ್ಮಾನಿಸಿದರು.
ಸಂಸದ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ, ಮೇಯರ್ ಬಸಪ್ಪ ಚಿಕ್ಕಲದಿನ್ನಿ ಮೊದಲಾದವರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ