ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಎಲ್ಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಸರ್ವ ಜನಾಂಗದ ಕಲ್ಯಾಣಕಾರಿ ಬಜೆಟ್ ಮಂಡಿಸಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಸಂತಸ ವ್ಯಕ್ತಪಡಿಸಿದ್ದಾರೆ.
ರೈತರ ಸಾಲ ಮನ್ನಾಮಾಡಿ ವಿವಿಧ ಕೃಷಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿ ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಎಲ್ಲ ಜಿಲ್ಲೆಗಳಿಗೂ ವಿವಿಧ ಯೋಜನೆಗಳನ್ನು ನೀಡಿ ಪ್ರಾದೇಶಿಕ ಅಸಮಾಧಾನವನ್ನು ಹೋಗಲಾಡಿಸುವ ಬಜೆಟ್ ಮಂಡಿಸಿದ್ದಾರೆ ಎಂದು ಹೆಬ್ಬಾಳಕರ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ