Kannada NewsKarnataka NewsLatest

*ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಮೂಲದ ಪ್ರದೀಪ್ (20) ಹಾಗೂ ಭವೀಷ್ (21) ಮೃತ ವಿದ್ಯಾರ್ಥಿಗಳು. ಮಲೆ ಮಹದೇಶ್ವರ ಬೆಟ್ಟದ ಕಡೆಯಿಂದ ಮೈಸೂರಿನತ್ತ ಸಾಗುತ್ತಿದ್ದ ಬಸ್, ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button