Latest

*ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿ ನೇಮಕ*

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಗಂಭೀರ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿಯೊಬ್ಬರನ್ನ ನೇಮಕ ಮಾಡಲಾಗಿದ್ದು, ಈ ವಿಚಾರ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ತುಮಕೂರು ಜಿಲ್ಲೆಯ ತುರುವೇಕೆರೆ ತಹಶೀಲ್ದಾರ್ ಆಗಿದ್ದ ಕುಂ.ಞಿ ಅಹಮದ್ ನವೆಂಬರ್ 5 ರಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ಕರ್ತವ್ಯ ವರದಿ ಮಾಡಿಕೊಂಡಿದ್ದು, ಇವರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಹುದ್ದೆಯಿಂದ ವಜಾಗೊಳಿಸುವಂತೆ ಮಂಡ್ಯದ ಸಾಮಾಜಿಕ ಕಾರ್ಯಕರ್ತ ಕೆ.ಆರ್. ರವೀಂದ್ರ ಅವರು ರಾಜ್ಯಪಾಲರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.

Related Articles

Back to top button