ಪ್ರಗತಿವಾಹಿನಿ ಸುದ್ದಿ, ತುಮಕೂರು
ಸೋಮವಾರ ಲಿಂಗೈಕ್ಯರಾದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮಿಗಳ ಅಂತಮ ದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಆರಂಭವಾದ ಭಕ್ತರ ಪ್ರವಾಹ ಸಾಗರೋಪಾದಿಯಲ್ಲಿ ಮುಂದುವರಿದಿದೆ. ಸುಮಾರು 2 ಕಿಮೀ ವರೆಗೆ 4-5 ಸಾಲುಗಳಲ್ಲಿ ಜನರು ನಿಂತಿದ್ದಾರೆ. ಸಂಜೆ 4 ಗಂಟೆಯವರೆಗೆ ಭಕ್ತರಿಗೆ ಅಂತಿಮ ದರ್ಶನಕ್ಕೆ ್ವಕಾಶ ನೀಡಲು ನಿರ್ಧರಿಸಲಾಗಿದೆ. ಆದರೆ ಭಕ್ತರ ಸಂಖ್ಯೆ ಮುಗಿಯುವ ಸೂಚನೆ ಕಾಣುತ್ತಿಲ್ಲ. 5 ಗಂಟೆಯ ನಂತರ ಅಂತಿಮ ಕ್ರಿಯಾವಿಧಿ ನಡೆಸಲು ನಿರ್ಧರಿಸಲಾಗಿದೆ.
ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದರೂ ಸ್ವಲ್ಪವೂ ಗದ್ದಲವಿಲ್ಲ. ಶಾಂತವಾಗಿ ಜನರು ಶ್ರೀಗಳನ್ನು ಕಣ್ಣಲ್ಲಿ ತುಂಬಿಕೊಳ್ಳುತ್ತಿದ್ದಾರೆ. ಬಂದ ಭಕ್ತರಿಗೆಲ್ಲ ಮಠದಲ್ಲಿ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಜನರು ಪ್ರಸಾದ ಸಿದ್ದಪಡಿಸುವಲ್ಲಿ ನಿರತರಾಗಿದ್ದಾರೆ.
ಮಂಗಳವಾರ ಮಾಜಿ ಪ್ರಧಾನಿ ಚ್.ಡಿ.ದೇವೇಗೌಡ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ರಾಮದೇವ ಬಾಬಾ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಕೇಂದ್ರ ಸರಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಗೃಹ ಮಂತ್ರಿ ಎಂ.ಬಿ.ಪಾಟೀಲ ಮೊದಲಾದವರು ಮಠದಲ್ಲೇ ಬೀಡುಬಿಟ್ಟಿದ್ದಾರೆ.
ಶ್ರೀಗಲ ಗೌರವಾರ್ಥ ತುಮಕೂರು ಮಂಗಳವಾರ ಅಘೋಷಿತ ಬಂದ್ ಆಚರಿಸುತ್ತಿದೆ. ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲಿಲ್ಲ.
ಭಕ್ತರು ತುಮಕೂರಿಗೆ ಆಗಮಿಸಲು ಅನುಕೂಲವಾಗಲೆಂದು ಬೆಂಗಳೂರಿನಿಂದ 2 ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ತುಮಕೂರು ಜಿಲ್ಲೆಯ ಪ್ರತಿ ಹಳ್ಳಿಯಿಂದ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ