ಪ್ರಗತಿವಾಹಿನಿ ಸುದ್ದಿ, ತುಮಕೂರು
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮಿಗಳ ದರ್ಶನ ಪಡೆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅವರ ಆರೋಗ್ಯ ವಿಚಾರಿಸಿದರು.
ಶುಕ್ರವಾರ ಧಾರವಾಡದಲ್ಲಿ ನಡೆಯುತ್ತಿರುವ 84ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲು ಆಗಮಿಸುವ ವೇಳೆ ತುಮಕೂರಿಗೆ ತೆರಳಿದ ಸಿಎಂ, ಶ್ರೀಗಳ ದರ್ಶನ ಪಡೆದರು. ಶ್ರೀಗಳು ಆರೋಗ್ಯವಾಗಿದ್ದಾರೆ. ಯಾರೂ ಆತಂಕಪಡಬೇಕಾದ ಅಗತ್ಯವಿಲ್ಲ. ಲವಲವಿಕೆಯಿಂದ ಇದ್ದಾರೆ. ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಅತ್ಯಂತ ತಾಲ್ಮೆಯಿಂದ ಚಿಕಿತ್ಸೆ ನೀಡುತ್ತಿದ್ದಾರೆ. ವಯಸ್ಸಾಗಿರುವುದರಿಂದ ಚಿಕಿತ್ಸೆ ನೀಡುವುದು ಕಷ್ಟ. ಹಾಗಾಗಿ ವೈದ್ಯರ ಸೇವೆ ಶ್ಲಾಘನೀಯ ಎಂದು ಸಿಎಂ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ