Latest

ಬಿಜೆಪಿ ಪಂಚಾಯತ್ ಸದಸ್ಯನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿಜೆಪಿ ಬೆಂಬಲಿತ ಸದಸ್ಯನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ.

ಮಂಗಳೂರುರು ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ಹತ್ಯೆ ಮಾಡಲಾಗಿದೆ. ಮೃತ ವ್ಯಕ್ತಿಯನ್ನು ಯಾಕುಬ್ ಎಂದು ಗುರುತಿಸಲಾಗಿದೆ.

ಸ್ಥಳೀಯ ನಿವಾಸಿ ಶಾಕೀರ್ ಎಂಬಾತ ಕೊಲೆ ಮಾಡಿದ ಆರೋಪಿ. ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.

ಜಗಳದ ವೇಳೆ ಶಾಕೀರ್, ಯಾಕೂಬ್ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೆ ನೆಲಕ್ಕೆ ದೂಡಿ ಹಾಕಿ ಎದೆಗೆ ಕಾಲಿನಿಂದ ಒದ್ದಿದ್ದಾನೆ. ಪರಿಣಾಮ ಯಾಕೂಬ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

 

Related Articles

Back to top button