Latest

ಸುರೇಶ ಅಂಗಡಿ ದೂರು; ಸಾಧುನವರ್ ಗೆ ನೋಟೀಸ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ತಮ್ಮ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಹಾಕಲಾಗಿದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

Home add -Advt

ಸಾಧುನವರ್ ಅಭಿಮಾನಿಗಳ ಬಳಗ ಮತ್ತು ಸಾಧುನವರ್ ಯುಥ್ ಬ್ರಿಗೇಡ್ ಹೆಸರಲ್ಲಿನ ಫೇಸ್‌ಬುಕ್‌ ಪೇಜ್ ನಲ್ಲಿ ತಮ್ಮ ಬಗ್ಗೆ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಮಾಳವಿಕ ವಿರುದ್ಧ ಅವಹೇಳನಕಾರಿ ಬರಹ ಹಾಕಲಾಗಿದೆ. ಮತ್ತು ಫೋಟೊ ಕೂಡ ಬಳಸಲಾಗಿದೆ ಎಂದು ದೂರಲಾಗಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಸಾಧುನವರ್ ಗೆ ನೋಟೀಸ್ ಜಾರಿ ಮಾಡಿದ್ದು, ತಕ್ಷಣ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಉತ್ತರಿಸದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ.

Related Articles

Back to top button