Latest

ಅಧಿವೇಶನದ ಬಳಿಕ ರಾಜ್ಯ ಪ್ರವಾಸ; ಆಡಳಿತಕ್ಕೆ ಚುರುಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿಧಾನಮಂಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾವಣಗೆರೆಯಲ್ಲಿ‌ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ರಾಜ್ಯ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಹಲವಾರು ವಿಚಾರಗಳ ಬಗ್ಗೆ ಇಲ್ಲಿ ಚರ್ಚೆಗಳು ನಡೆದಿವೆ. ಇದರ ಯಶಸ್ಸು ಪಕ್ಷದ ಪ್ರತಿಯೊಬ್ಬ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲ್ಲುತ್ತದೆ ಎಂದರು.

ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಹೊಸ ಜಾತಿಗಳನ್ನು ಸೇರ್ಪಡೆ ಮಾಡುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಿರುವುದನ್ನು ಕಾರ್ಯಕಾರಣಿ ಸಭೆ ಸ್ವಾಗತಿಸಿತು.

ಅಧಿವೇಶನದ ನಂತರ ರಾಜ್ಯಾದ್ಯಂತ ಸಂಚಾರ ಮಾಡಿ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಅವರು ಹೇಳಿದರು.

Home add -Advt

ದಾವಣಗೆರೆಯ ರಾಜ್ಯ ಕಾರ್ಯಕಾರಣಿ ಸಭೆ ಯಶಸ್ವಿಯಾಗಲು ಕಾರಣೀಭೂತರಾದ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ್ , ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ , ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಿಎಂ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.

ಪ್ರಧಾನಿಯವರಿಂದ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘನೆ

Related Articles

Back to top button