Kannada NewsKarnataka NewsLatest

*BREAKING: ಸೌಜನ್ಯ ಕೇಸ್*: *SIT ಮುಖ್ಯಸ್ಥರನ್ನು ಬದಲಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ ಐಟಾಇ) ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾಯಿಸಿದೆ.

ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಎಸ್ ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಎಸ್ ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಶಶಿಕುಮಾರ್ ಅವರು, ತಮ್ಮನ್ನು ಈ ಸ್ಥಾನದಿಂದ ಕೈಬಿಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಎಸ್ ಐಟಿ ಮುಖ್ಯಸ್ಥರನ್ನು ಬದಲಾವಣೆ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button