Kannada NewsKarnataka NewsLatest

*ಮತ್ತೆ ಮಳೆ ಅಬ್ಬರದ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಎರಡು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಮಳೆ ಅವಾಂತರಗಳು ಮುಂದುವರೆದಿದೆ. ಈ ನಡುವೆ ಜುಲೈ 3ರ ಬಳಿಕ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ ಮೂರರ ಬಳಿಕ ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಜುಲೈ 3ರ ಬಳಿಕ ಅಬ್ಬರದ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಳಗಾವಿ, ಗದಗ,ಬಾಗಲಕೋಟೆ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯನಗರ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button