Latest

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್ ಕೇಸ್; ಆರೋಪಿ ಮಹಿಳೆ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ಮಹಿಳೆಯನ್ನು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ನಾಯಕ ಅನಂತರಾಜು ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ರೇಖಾಳನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಬ್ಲ್ಯಾಕ್ ಮೇಲ್ ಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಮೇ 12ರಂದು ಬಿಜೆಪಿ ನಾಯಕ ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೆತ್ ನೋಟ್ ನಲ್ಲಿ ತಾನು ರೇಖಾ ಎಂಬ ಮಹಿಳೆ ಸಹವಾಸಕ್ಕೆ ಸಿಲುಕಿ, ಬ್ಲ್ಯಾಕ್ ಮೇಲ್ ಗೊಳಗಾಗಿದ್ದು, ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು.

ಮೃತ ಅನಂತರಾಜು ಪತ್ನಿ ದೂರು ಆಧರಿಸಿ ರೇಖಾ, ವಿನೋದ್, ಸ್ಪಂಧನ ಎಂಬುಅವ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ರೇಖಾಳನ್ನು ಬಂಧಿಸಿರುವ ಪೊಲೀಸರು ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
ಶಾಸಕರ ಹೆಸರಲ್ಲಿ ಮಹಿಳೆಯಿಂದ ವಂಚನೆ

Home add -Advt

Related Articles

Back to top button