Latest

*ಸಿದ್ದರಾಮಯ್ಯನವರನ್ನು ಸೋಲಿಸಲು ಅವರ ಪಕ್ಷದಲ್ಲೇ ಟೀಂ ರೆಡಿಯಾಗಿದೆ ಎಂದ ಮಾಜಿ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಓರ್ವ ಸಿಎಂ ಆಗಿದ್ದವರು, ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯನವರಿಗೆ ಕ್ಷೇತ್ರ ಹುಡುಕಾಟದಂತಹ ಸ್ಥಿತಿ ಬಂದಿರುವುದು ಶೋಚನೀಯ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ಅವರ ಪಕ್ಷದಲ್ಲೇ ಟಿಂ ರೆಡಿಯಾಗಿದೆ. ರಾಷ್ಟ್ರೀಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯನವರಿಗೇ ಸ್ಪರ್ಧೆಗೆ ಕ್ಷೇತ್ರ ಸಿಗುತ್ತಿಲ್ಲ. ಇಂತಹ ಗೊಂದಲ ಸೃಷ್ಟಿ ಮಾಡುತ್ತಿರುವುದೂ ಅವರ ಪಕ್ಷದವರೇ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯನವರನ್ನು ಚುನಾವಣೆಯಲ್ಲಿ ಸೋಲಿಸಲು ಅವರ ಪಕ್ಷದಲ್ಲೇ ತಂಡ ಸಿದ್ಧವಾಗಿದೆ. ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Home add -Advt

Related Articles

Back to top button