Kannada NewsKarnataka NewsLatestPolitics

*ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಬಿಜೆಪಿ, ಜೆಡಿಎಸ್ ಬೆನ್ನಲ್ಲೇ ಇದೀಗ ಆಮ್ ಆದ್ಮಿ ಪಕ್ಷದ ಮುಖಂಡರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ಶಿವಮೊಗ್ಗ ನಗರದ ಟಿ ನೇತ್ರಾವತಿ, ಬೆಳಗಾವಿ ದಕ್ಷಿಣದ ನೂರ್ ಅಹ್ಮದ್ ಕುತುಬುದ್ಧಿನ್ ಮುಲ್ಲಾ, ಶಿವಮೊಗ್ಗ ಗ್ರಾಮಾಂತರದ ಮಂಜುನಾಥ್ ಎಸ್ ಎಸ್, ಬೈಲಹೊಂಗಲದ ಚಿಕ್ಕನಗೌಡ ಸೇರಿದಂತೆ ರಾಜ್ಯದ ನಾನಾ ಕಡೆಯ ಆಮ್ ಆದ್ಮಿ ಪಕ್ಷದ ಮುಖಂಡರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Home add -Advt

ಈ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಆಪ್ ಮುಖಂಡರಿಗೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.


Related Articles

Back to top button