ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ 2.80 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾಮಗಾರಿಗೆ ಗುರುವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಧಿಕೃತವಾಗಿ ಚಾಲನೆ ನೀಡಿದರು.
ನೂರು ವರ್ಷಗಳ ನಂತರ ಹಿಂಡಲಗಾ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ಜರುಗಲಿದ್ದು, ಜಾತ್ರಾ ಸಿದ್ದತೆ ಕುರಿತೂ ಸಹ ಲಕ್ಷ್ಮಿ ಹೆಬ್ಬಾಳಕರ್ ಜಾತ್ರಾ ಕಮೀಟಿಯವರೊಂದಿಗೆ ಚರ್ಚಿಸಿದರು.
ರಸ್ತೆಗಳ ನಿರ್ಮಾಣ, ಹಳೆಯ ವಿದ್ಯುತ್ ಕಂಬಗಳನ್ನು ಮತ್ತು ತಂತಿಗಳನ್ನು ತೆರುವುಗೊಳಿಸಿ ಹೊಸ ವಿದ್ಯುತ್ ಕಂಬಗಳ ಜೊತೆಗೆ ತಂತಿಗಳನ್ನು ಅಳವಡಿಸುವುದರ ಬಗ್ಗೆ ಹಾಗೂ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಗ್ರಾಮದ ಎಲ್ಲ ದೇವಸ್ಥಾನಳಿಗೆ ಪೇಂಟಿಂಗ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ ಸಲುವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ಗ್ರುಪ್ ಗಳಿಗೆ ಶೇರ್ ಮಾಡಿ)