Latest

ಹಿರಿಯ ಗಾಂಧಿವಾದಿ, ಮಾಜಿ ಎಂಎಲ್ ಸಿ ಬಸಗೌಡ ಪಾಟೀಲ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಹಿರಿಯ ಗಾಂಧೀವಾದಿ, ಮಾಜಿ ವಿಧಾನಪರಿಷತ್ ಸದಸ್ಯ, ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಮಾಜಿ ಅಧ್ಯಕ್ಷ ಬಸವನಗೌಡ ಪಾಟೀಲ (100) ನಿಧನರಾಗಿದ್ದಾರೆ.

ಬಸವನಗೌಡ ಪಾಟೀಲ ಮಾಜಿ ಸಚಿವ ಎ.ಬಿ.ಪಾಟೀಲ ಅವರ ತಂದೆ. ಸಂಕೇಶ್ವರ ಸಮೀಪ ಅಮ್ಮಿನಬಾವಿಯಲ್ಲಿ ಅವರು ವಾಸವಾಗಿದ್ದರು. ಸಹಕಾರ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು ಮಾಡಿದ್ದ ಅವರು, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ಕಟ್ಟಾ ಅನುಯಾಯಿಯಾಗಿದ್ದರು. ಅದೇ ವೇಳೆ ವಿಧಾನಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button