Latest

ಹುಕ್ಕೇರಿಮಠದ ಬೆಳಗಾವಿ ಶಾಖೆಯಲ್ಲಿ 5ರಂದು ಉಚಿತ ಆರೋಗ್ಯ ತಪಾಸಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಇದೇ 5ರಂದು ಬೆಳಗಾವಿಯ ಹುಕ್ಕೇರಿ ಹಿರೇಮಠದ ಶಾಖಾಮಠದಲ್ಲಿ ಸುವಿಚಾರ ಚಿಂತನ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತಿ ನಿಮಿತ್ತ ವಾಗಿ ವೇದ ಆರೋಗ್ಯ ಕೇಂದ್ರ ಶಿರಸಿಯ ನಿಸರ್ಗ ಮನೆಯ ಡಾ. ವೆಂಕಟರಮಣ ಹೆಗಡೆ ಅವರು ಉಚಿತ ಆರೋಗ್ಯತಪಾಸಣೆಯನ್ನು ಮಾಡಲಿದ್ದಾರೆ.

ಈ ಉಚಿತ ಆರೋಗ್ಯ ತಪಾಸಣೆಯಲ್ಲಿ ವೇದ ಆರೋಗ್ಯ ಕೇಂದ್ರದ ನಿಸರ್ಗ ಮನೆಯ ನುರಿತ ವೈದ್ಯರು ಭಾಗವಹಿಸಲಿದ್ದಾರೆ. ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆ ಗಮನ ಹರಿಸದೇ ಬಹಳಷ್ಟು ಜನ ತೊಂದರೆಯನ್ನು ಅನುಭವಿಸುತಿದ್ದಾರೆ. ಇವರಿಗೆ ಸೂಕ್ತ ಮಾರ್ಗದರ್ಶನ ಮಾಡಲು ಉಚಿತ ಆರೋಗ್ಯ ತಪಾಸಣೆಯನ್ನು ಇದೆ 5ರಂದು ಮುಂಜಾನೆ 10ಗಂಟೆಯಿಂದ 6 ಗಂಟೆಯವರೆಗೆ ಏರ್ಪಡಿಸಲಾಗಿದೆ.

ಸಂಜೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಅಡುಗೆ ಮನೆಯಲ್ಲಿ ಆರೋಗ್ಯ ಎಂಬ ಉಪನ್ಯಾಸವನ್ನು ನೀಡಲಿದ್ದಾರೆ.

ಉಚಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಲಿಚ್ಚಿಸುವರು ಮುಂಚಿತವಾಗಿ ಶ್ರೀಮಠದಲ್ಲಿ ಹೆಸರು ನೋಂದಾಯಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Home add -Advt

Related Articles

Back to top button